Breaking News

24 ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಪಟ್ಟಣದ ತಾಲೂಕು ಪಂಚಾಯತ್ ಆವಾರದ ಗಾಂಧಿ ಕುಟಿರದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಯವರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 24 ವಿಕಲಚೇತರಿಗೆ ತ್ರಿಚಕ್ರವಾಹನ ವಿತರಿಸಿದರು.

      ಸಮಾಜದಲ್ಲಿ ವಿಶೇಷ ಚೇತನರಿಗೆ ಸರ್ಕಾರಗಳು ಕಳಕಳಿ ತೋರುವುದು ಮತ್ತು ಅವರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಡುವುದು ಬದ್ದತೆಯ ಕಾರ್ಯವಾಗಿದೆ. ನನ್ನ ಪಾಲಿಗೆ ಬಂದ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯಲ್ಲಿ ಇಂತಹ ಸಾರ್ಥಕ ಕಾರ್ಯಕ್ಕೆ ಬಳಕೆಯಾಗುತ್ತಿರುವುದಕ್ಕೆ ತೃಪ್ತಿ ಇದೆ. ಸರ್ಕಾರದಿಂದ ನೀಡಿರುವ ವ್ಯವಸ್ಥೆಯ ಸದುಪಯೋಗ ಪಡೆದು ಗುಣ ಮಟ್ಟದ ನಿರ್ವಹಣೆ ಮಾಡಿಕೊಳ್ಳಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ್, ಮಂಜುನಾಥ್ ಅಗೇರ್, ಪ್ರಮುಖರಾದ ಪ್ರಸಾದ್ ಹೆಗಡೆ ಇನ್ನಿತರ ಅಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *