
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಸಾಲ ತುಂಬುವ ವಿಚಾರದಲ್ಲಿ ಗಂಡ ಹೆಂಡತಿಯ ಮಧ್ಯೆ ಕಲಹವಾಗಿ ಅದನ್ನೆ ಮನಸ್ಸಿಗೆ ಹಚ್ಚಿಕೊಂಡ ಪತಿ ನೇಣುಬಿಗಿದುಕೊಂಡ ಘಟನೆ ಪಟ್ಟಣದ ನೂತನನಗರ ಜಡ್ಡಿಯಲ್ಲಿ ನಡೆದಿದೆ.

ವಿನಾಯಕ ಗುರುಸಿದ್ದಪ್ಪ ಅಮಾಸಿ(೩೭) ಎಂಬಾತನೇ ಮೃತ ವ್ಯಕ್ತಿಯಾಗಿದ್ದು ಸಾಲ ತುಂಬುವ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ವಿನಾಯಕ ಗುರುಸಿದ್ದಪ್ಪ ಅಮಾಸಿ ಅಡುಗೆಮನೆ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.
ಈ ಕುರಿತು ಆತನ ಪತ್ನಿ ವೈಸಾಲಿ ವಿನಾಯಕ ಅಮಾಸಿ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Prathidvani Yellapura