Breaking News

ಹುಬ್ಬಳ್ಳಿ-ಯಲ್ಲಾಪುರ-ಅಂಕೋಲಾ ರೈಲ್ವೆ ಯೋಜನೆ ಕಥೆ ಏನಾಗಿದೆ – ಸದ್ಯದ ಮಾಹಿತಿ ಏನು.?? ಇಲ್ಲಿದೆ ನೋಡಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಸಂಪರ್ಕ ಸಾಧಿಸುವ ಮಹತ್ವಾಕಾಂಕ್ಷಿ ಹುಬ್ಬಳ್ಳಿ-ಯಲ್ಲಾಪುರ-ಅಂಕೋಲ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು  ಅಂದಾಜು 17,141 ಕೋಟಿ ರೂ. ವೆಚ್ಚದ ಪರಿಷ್ಕೃತ ವಿಸ್ತೃತ ಯೋಜನಾ ವರದಿ(ಡಿಪಿಆರ್‌ ) ಯನ್ನು ಇತ್ತೀಚೆಗೆ ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ.

ನೂತನ ಡಿ ಪಿ ಆರ್ ಪ್ರಕಾರ ಈಗಿರುವ ರಾಷ್ಟ್ರೀಯ ಹೆದ್ದಾರಿ  ಪಕ್ಕದಲ್ಲೇ ಜೋಡಿ ಮಾರ್ಗ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಮೊದಲು 595 ಹೆಕ್ಟೇ‌ರ್ ಅರಣ್ಯ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಪರಿಷ್ಕೃತ ವರದಿಯಲ್ಲಿ 10 ಹೆಕ್ಟೇರ್‌ನಷ್ಟು ಕಡಿಮೆಗೊಳಿಸಲಾಗಿದೆ. 163 ಕಿ.ಮೀ ಅಂತರದ ಈ ಮಾರ್ಗದಲ್ಲಿ 97 ಕಿ.ಮೀ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತದೆ. ಅದರಲ್ಲಿಯೂ 46.57 ಕಿ.ಮೀ ಅಂತರದಲ್ಲಿ 57 ಸುರಂಗ ನಿರ್ಮಿಸಬೇಕಾಗುತ್ತದೆ ಎಂದು ಡಿಪಿಆರ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

  ಯಲ್ಲಾಪುರ – ಸುಂಕಸಾಲವರೆಗಿನ ಘಟ್ಟ ಪ್ರದೇಶದಲ್ಲಿ ಬೆಟ್ಟ ಕೊರೆದು ಸುರಂಗಗಳನ್ನು ನಿರ್ಮಿಸಬೇಕಾಗುತ್ತದೆ. ಇದಲ್ಲದೇ ಮಾರ್ಗದ ನಾನಾ ಕಡೆಗಳಲ್ಲಿ ತಗ್ಗು ಪ್ರದೇಶಗಳು, ಹೊಂಡಗಳು ಬರುತ್ತಿದ್ದು, ಒಟ್ಟು 13.89 ಕಿ.ಮೀ ಉದ್ದದಷ್ಟು ಮೇಲ್ಸೇತುವೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ವಿವರಿಸಲಾಗಿ.


 ಹುಬ್ಬಳ್ಳಿ-ಯಲ್ಲಾಪುರ ನಡುವೆ 75 ಕಿ.ಮೀ ಬಯಲು ಪ್ರದೇಶ, ಯಲ್ಲಾಪುರ-ಸುಂಕಸಾಳ 55 ಕಿ.ಮೀ ಘಟ್ಟ ಪ್ರದೇಶ. ಸುಂಕಸಾಳ- ಅಂಕೋಲಾ ವರೆಗೆ ಗುಡ್ಡಗಾಡು ಇದೆ. ಯೋಜನೆಗೆ ಒಟ್ಟು 995 ಹೆಕ್ಟೇ‌ರ್ ಭೂಮಿ ಬೇಕಾಗುತ್ತದೆ. ಇದರಲ್ಲಿ 585 ಹೆಕ್ಟೇರ್ ಅರಣ್ಯ, 184 ಹೆಕ್ಟೇರ್ ನೀರಾವರಿ ಭೂಮಿ ಹಾಗೂ 185 ಹೆಕ್ಟೇರ್ ಒಣಭೂಮಿ, 1.40 ಹೆಕ್ಟೇರ್ ನಗರ ಪ್ರದೇಶ ಒಳಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ.

ಈ ಮಾರ್ಗದಿಂದ ಕಲ್ಲಿದ್ದಲು, ಕಬ್ಬಿಣ ಅದಿರು, ಆಹಾರ ಧಾನ್ಯ ಮೊದಲಾದ ಸರಕು ಸಾಗಿಸಬಹುದಾಗಿದೆ. ಕರಾವಳಿ ಬಂದರುಗಳಿಂದ ರಫ್ತು ವಹಿವಾಟು ಹೆಚ್ಚಿಸಲು ಹಾಗೂ ಪ್ರವಾಸೋದ್ಯಮಕ್ಕೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಯೋಜನೆಯನ್ನು ಕರ್ನಾಟಕ ಸರ್ಕಾರ ಹಾಗೂ ರೈಲ್ವೆ ಇಲಾಖೆಯಿಂದ 50:50 ಅನುಪಾತದಲ್ಲಿ ಅನುಷ್ಠಾನಗೊಳಿಸಬೇಕಿದೆ.

“ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಉತ್ತರ ಕರ್ನಾಟಕ ಭಾಗದ ಬಹುಮುಖ್ಯ ರೈಲ್ವೆ ಯೋಜನೆಯಾಗಿದೆ. ಈ ರೈಲು ಮಾರ್ಗ 163 ಕಿ.ಮೀ ಉದ್ದದವಿದೆ. ಈ ಯೋಜನೆ ಡಿಪಿಆರ್ ಅನ್ನು ಫೆ. 17 ರಂದು ರೈಲ್ವೆ ಬೋರ್ಡ್ಗೆ ಸಲ್ಲಿಕೆ ಮಾಡಿರುವ. ಮಾಹಿತಿ ಲಭ್ಯವಾಗಿದ್ದು ರೈಲ್ವೆ ಬೋರ್ಡ್ ಯೋಜನೆ ಅಂತಿಮಗೊಳಿಸುವುದು ಬಾಕಿ‌ ಇದೆ.


    ಸರ್ವೆ ಕಾರ್ಯದಲ್ಲಿ ಬಹಳಷ್ಟು ಮಾರ್ಪಾಡು ಮಾಡಲಾಗಿದ್ದು ಈ‌ ಮೊದಲು ಸಿಂಗಲ್‌ ಲೈನ್ ಅಂದಾಜಿಸಲಾಗಿತ್ತು.‌ ಹೊಸ ಡಿಪಿಆರ್ ಅನ್ವಯ ಡಬಲ್ ಲೈನ್ನಲ್ಲಿ‌ ನಿರ್ಮಿಸಲಾಗುತ್ತದೆ. ಸಿಂಗಲ್ ಲೈನಿಗೆ 595 ಹೆಕ್ಟೇರ್ ಅರಣ್ಯ ಪ್ರದೇಶದ ‌ಅವಶ್ಯಕತೆ ಇತ್ತು. ಆದರೆ  ಈಗ ಡಬಲ್ ಲೈನಿನಲ್ಲಿ ಮಾಡಿದ್ರೂ ಕೂಡ 586 ಹೆಕ್ಟೇರ್ ನಲ್ಲಿ ಕೆಲಸ ಮುಗಿಯುತ್ತದೆ. ಅಂದರೆ ಡಬಲ್ ಲೈನ ಮಾಡಿದ್ರೂ ಕೂಡ 10 ಹೆಕ್ಟೇರ್ ‌ಕಡಿಮೆ ಅರಣ್ಯ ಭೂಮಿ ಬಳಕೆ ಮಾಡಲಾಗುತ್ತಿದೆ. ವನ್ಯಜೀವಿ ಮಂಡಳಿ ಹಾಗೂ ರೈಲ್ವೆ ಅಧಿಕಾರಿಗಳು ಸಲಹೆ ಸೂಚನೆಗಳ ಕಾರಣದಿಂದ ಇದು ಸಾಧ್ಯವಾಗಿದೆ.

163 ಕಿ.ಮೀ ಅಂತರದ ಈ ಮಾರ್ಗದಲ್ಲಿ 97 ಕಿ.ಮೀ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತದೆ. ಅದರಲ್ಲಿಯೂ 46 ಕಿ.ಮೀ ಅಂತರದಲ್ಲಿ 57 ಸುರಂಗಗಳನ್ನು ನಿರ್ಮಿಸಬೇಕಾಗುತ್ತದೆ. ಹುಬ್ಬಳ್ಳಿ – ಅಂಕೋಲಾ ರಾಷ್ಟೀಯ ಹೆದ್ದಾರಿ ಪಕ್ಕ ರೈಲ್ವೆ ಹಳಿ ನಿರ್ಮಾಣ ಮಾಡಲಾಗುತ್ತದೆ.‌ ಇದರ ಯೋಜನಾ ವೆಚ್ಚ 17,141 ಕೋಟಿ ಇದ್ದು, ಇದರ ಸಂಪೂರ್ಣ ಡಿಪಿಆರ್‌ ರೈಲ್ವೆ ಬೋರ್ಡ್ಗೆ ಸಲ್ಲಿಕೆಯಾಗಿದ್ದು, ಎಲ್ಲರ ಚಿತ್ತ ರೈಲ್ವೆ ಬೋಡ್೯ ನತ್ತ ಆಗಿದೆ.



ಈ ಯೋಜನೆಯಿಂದ ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದ ಈ ಪ್ರದೇಶದಲ್ಲಿ ವನ್ಯ ಜೀವಿಗಳಿಗೆ ತೊಂದರೆಯಾಗಲಿದೆ ಎಂದು ಪರಿಸರವಾದಿಗಳು ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ವನ್ಯಜೀವಿ ಮಂಡಳಿಯ ತಂಡ ಕಳೆದ ಜನವರಿಯಲ್ಲಿ ಖುದ್ದು ಸಮೀಕ್ಷೆ ನಡೆಸಿ ಪ್ರಾಣಿಗಳ ಸಂಚಾರ, ಸಸ್ಯ ಸಂಕುಲ ಹಾಗೂ ಅಳಿವಿನ ಅಂಚಿನಲ್ಲಿರುವ ಈ ಪ್ರದೇಶದ ಸಸ್ಯ ಪ್ರಭೇದಗಳ ಮಾಹಿತಿಯನ್ನು ಕಲೆಹಾಕಿ ವರದಿ ಸಲ್ಲಿಸಿರುವುದಾಗಿ  ತಿಳಿದು ಬಂದಿದೆ.

1999ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಇದರಿಂದ ಕಾಮಗಾರಿ ಮುಂದುವರಿದು ಹುಬ್ಬಳ್ಳಿಯಿಂದ ಕಲಘಟಗಿವರೆಗೆ 34 ಕಿ.ಮೀ ಮಾರ್ಗವನ್ನು ಈಗಾಗಲೇ ನಿರ್ಮಿಸಲಾಗಿದೆ. ಆ ಕಾಲದಲ್ಲಿ ಯೋಜನೆಗೆ 494 ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿತ್ತು. ಈಗ ವೆಚ್ಚ ಬಹು ಪಟ್ಟು ಹೆಚ್ಚಾಗಿದೆ. ವನ್ಯ ಜೀವಿ ಮಂಡಳಿ ಸಲಹೆ ಸೂಚನೆಗೆ ಅನುಗುಣವಾಗಿ ಹಲವು ಬದಲಾವಣೆಗಳನ್ನು ಮಾಡಿಕೊಂಡು ಯೋಜನಾ ವರದಿ ಸಲ್ಲಿಕೆ ಮಾಡಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *