Breaking News

ಏ,11 ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ “ಜನಾಕ್ರೋಶ ಯಾತ್ರೆ” ಗೆ ಯಲ್ಲಾಪುರಕ್ಕೆ ಆಗಮನ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ರಾಜ್ಯ ಸರ್ಕಾರದ ವೈಪಲ್ಯತೆ ಜನರಲ್ಲಿ ಮಡುಗಟ್ಟಿರುವ ಆಕ್ರೋಶ ಹೊರಹಾಕುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಪಾದಯಾತ್ರೆ ಆಗಮಿಸುತ್ತಿದ್ದು ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಯಲ್ಲಾಪುರದಲ್ಲಿ ಏ,11 ರಂದು ನಡೆಯಲಿದ್ದು ಕಾಂಗ್ರೆಸ್ ಸರ್ಕಾರದ ದುರಾಡಳಿತ,ಸ್ವಜನ ಪಕ್ಷಪಾತ,ಓಟ್ ಬ್ಯಾಂಕ್ ರಾಜಕಾರಾಣ, ಎಸ್.ಸಿ/ಎಸ್.ಟಿ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಯ ದುರುಪಯೋಗ, ಮುಸ್ಲಿಂ ಸಮುದಾಯಕ್ಕೆ ವಿಶೇಷವಾಗಿ ಮೀಸಲಿಟ್ಟ 4% ಮೀಸಲಾತಿಯ ವಿರುದ್ದ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಬೇಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಎಸ್‌.ಹೆಗಡೆ ಹೇಳಿದರು.


ಅವರು ಪಟ್ಟಣದ ಟಿ.ಎಂ‌.ಎಸ್ ಸಭಾ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಏ,11 ರಂದು ಬೆಳಗ್ಗೆ 10 ಗಂಟೆಗೆ ಶಕ್ತಿ ದೇವತೆಯರಾದ ಗ್ರಾಮದೇವಿಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿ‌ವೈ.ವಿಜಯೇಂದ್ರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ “ಜನಾಕ್ರೋಶ ಬೃಹತ್ ಪಾದಯಾತ್ರೆ” ಸಾಗಲಿದೆ. ಯಾತ್ರೆಯು ಪೊಲೀಸ್ ಚೌಕ್ ನಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಬೆಲ್ ರಸ್ತೆ ಮೂಲಕ ಅಂಬೇಡ್ಕರ್ ವೃತ್ತದಲ್ಲಿ ಸಾಗಿ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಆವಾರದಲ್ಲಿ ಸಮಾವೇಶಗೊಂಡು ಸಭಾ ಕಾರ್ಯಕ್ರಮ ಜರುಗಲಿದೆ ಎಂದು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಪ್ರಧಾನಕಾರ್ಯದರ್ಶಿ ಗುರುಪ್ರಸಾದ್, ಯಲ್ಲಾಪುರ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಜಿಲ್ಲಾ ಪ್ರಮುಖರಾದ ಉಮೇಶ್ ಭಾಗ್ವತ್, ಪ್ರಶಾಂತ ನಾಯ್ಕ್, ಶಿವಾಜಿ ನರಸಾನಿ, ಪ್ರಮುಖರಾದ ಚಂದ್ರಕಲಾ ಭಟ್, ರಜನಿ ಚಂದ್ರಶೇಖರ್, ಕೆ.ಟಿ.ಹೆಗಡೆ, ಎನ್.ಕೆ.ಭಟ್ ಅಗ್ಗಾಶಿಕುಂಬ್ರಿ, ಗಣಪತಿ ಮಾನಿಗದ್ದೆ, ರವಿಕೈಟ್ಕರ್, ನಟರಾಜ ಗೌಡರ್, ಸೋಮೇಶ್ವರ ನಾಯ್ಕ್, ರಜತ್ ಬದ್ದಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *