Breaking News

ವಿಶ್ವದರ್ಶನ ಪಿಯು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ31 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ_ 2024_25 ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ವಾರ್ಷಿಕ ಪರೀಕ್ಷೆ 1ರ ಫಲಿತಾಂಶ ಇಂದು ಪ್ರಕಟವಾಗಿದ್ದು ತಾಲೂಕಿನ ವಿಶ್ವದರ್ಶನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ.

ಒಟ್ಟು 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನೊಂದಿಗೆ ಉತ್ತಮ ಫಲಿತಾಂಶ ಪಡೆದಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ 95.6 ಪ್ರತಿಶತದೊಂದಿಗೆ ಕುಮಾರಿ ಮಾಲಾ ದಿಬ್ಬದಮನಿ ಕಾಲೇಜಿಗೆ ಪ್ರಥಮ ಸ್ಥಾನವನ್ನು,
ಕುಮಾರಿ ದೀಕ್ಷಾ ಭಟ್ ಹಾಗೂ ಪೃಥ್ವಿ ಜೋಶಿ 95.5 ಪ್ರತಿಶತ ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನವನ್ನು, ಕುಮಾರಿ ಶ್ವೇತಾ ಗಾಂವ್ಕರ್ 95.3 ಪ್ರತಿಶತ ಫಲಿತಾಂಶದೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಕುಮಾರಿ ಸಹನಾ ಯಾರಿಗೆರಿ ಮತ್ತು ಕುಮಾರ ಸಂಪತ್ ನಾಯ್ಕ್ 95.83 ಪ್ರತಿಶತದೊಂದಿಗೆ ಪ್ರಥಮ ಸ್ಥಾನವನ್ನು ,
ಕುಮಾರ್ ಸುಬ್ರಹ್ಮಣ್ಯ ಭಟ್ 95.5 ಪ್ರತಿಶತದೊಂದಿಗೆ ದ್ವಿತೀಯ ಸ್ಥಾನವನ್ನು ಹಾಗೂ ಕುಮಾರಿ ಪವಿತ್ರಾ ನಾಯ್ಕ್ 94.8 ಪ್ರತಿಶತದೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ ಎಲ್ಲ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷರಾದ  ಹರಿಪ್ರಕಾಶ್ ಕೋಣೆಮನೆ ಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಅಭಿನಂದಿಸಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಭಾವಗಳ ಬ್ರಹ್ಮಾಂಡ” ಕವನ ಸಂಕಲನ ಮೇ 1 ಕ್ಕೆ ಅನಾವರಣ..

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಇದೇ ಮೊದಲು AI ತಂತ್ರಜ್ಞಾನ ಬಳಸಿ ಒಂದು ಸುಂದರ ಕವನ ಸಂಕಲನ ರೂಪುಗೊಂಡಿದ್ದು “ಭಾವಗಳ …

Leave a Reply

Your email address will not be published. Required fields are marked *