Breaking News

ದ್ವಿತೀಯ ಪಿ.ಯು ಫಲಿತಾಂಶ ಅಂಕಗಳು ಕಡಿಮೆಯಾಯಿತೆಂದು ನೊಂದ ವಿದ್ಯಾರ್ಥಿನಿ ಸಾವಿಗೆ ಶರಣು.


ಯಲ್ಲಾಪುರ : ದ್ವಿತೀಯ ಪಿಯುಸಿಯಲ್ಲಿ ಅಂಕಗಳು ಕಡಿಮೆ ಬಂದ ಕಾರಣ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ಬರಗದ್ದೆಯಲ್ಲಿ ನಡೆದಿದೆ.


ಏ.8 ರಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತಾಲೂಕಿನ ಬರಗದ್ದೆಯ ಮಂಜುನಾಥ ಮಹಾದೇವ ಪೂಜಾರಿ ಎಂಬುವರ ಮಗಳಾದ ದೀಪಿಕಾ ಮಂಜುನಾಥ ಪೂಜಾರ(18) ಎಂಬಾಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಶೇ.62ರಷ್ಟು ಅಂಕಗಳಿಸಿ ಉತ್ತೀರ್ಣಳಾಗಿದ್ದರೂ ಅಂಕಗಳು ಕಡಿಮೆಯಾಯಿತೆಂದು ನೊಂದು ತನ್ನ ಮನೆಯ ಸಮೀಪದ ತೋಟದಲ್ಲಿರುವ ಬಾವಿಗೆ ಬಿದ್ದು ಆ*ಹತ್ಯೆ ಮಾಡಿಕೊಂಡಿದ್ದಾಳೆ.


ಫಲಿತಾಂಶ ನೋಡಲು ಹೋದ ಮಗಳು ಮನೆಗೆ ಹಿಂತಿರುಗಲಿಲ್ಲ ಎಂದು ಕುಟುಂಬದವರು ಹುಡುಕಾಟ ನಡೆಸಿದರೂ ಪತ್ತೆಯಾಗದಿದ್ದು ಮನೆಯ ತೋಟದಲ್ಲಿದ್ದ ಬಾವಿಯಲ್ಲಿ ಹೆಣವಾಗಿ ಕಂಡುಬಂದಿದ್ದು ಅಗ್ನಿಶಾಮಕ ಇಲಾಖಾ ಸಿಬ್ಬಂದಿಗಳ ಸಹಾಯದಿಂದ ಶವವನ್ನು ಹೊರತೆಗೆಯಲಾಯಿತು.

ಮರಣೋತ್ತರ ಪರೀಕ್ಷೆಗಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ನಂತರ ಮೃತಳ ಕುಟುಂಬದ ಮೂಲಸ್ಥಳವಾದ ಬೈಂದೂರಿಗೆ ಅಂತ್ಯಕ್ರಿಯೆಗಾಗಿ ಕೊಂಡೊಯ್ಯಲಾಯಿತು. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಭಾವಗಳ ಬ್ರಹ್ಮಾಂಡ” ಕವನ ಸಂಕಲನ ಮೇ 1 ಕ್ಕೆ ಅನಾವರಣ..

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಇದೇ ಮೊದಲು AI ತಂತ್ರಜ್ಞಾನ ಬಳಸಿ ಒಂದು ಸುಂದರ ಕವನ ಸಂಕಲನ ರೂಪುಗೊಂಡಿದ್ದು “ಭಾವಗಳ …

Leave a Reply

Your email address will not be published. Required fields are marked *