Breaking News

ಹೆಮ್ಮಾಡಿ ಸ.ಹಿ.ಪ್ರಾ ಶಾಲೆಯ ಸುವರ್ಣ ಸಂಭ್ರಮ – ಶಾಸಕ ಹೆಬ್ಬಾರ್ ಉದ್ಘಾಟನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಸರ್ಕಾರಿ ಶಾಲೆಗಳೆಂದರೆ ಹಿಂಜರಿಯುವ ದಿನಗಳು ಕಳೆದು ಹೋದವು. ಗುಣ ಮಟ್ಟದ ಶಿಕ್ಷಣ, ಸಂಸ್ಕಾರ ಕಲಿಸುವ ಗುರುಗಳು, ಉತ್ತಮ ವಾತಾವರಣವಿರುವ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುತ್ತಿವೆ. ಮಕ್ಕಳು ವಿದ್ಯೆಯೊಂದಿಗೆ ಬದುಕಿನ ಪಾಠವನ್ನೂ ಕಲಿಯಬೇಕು. ತಾಲೂಕಿನ ಗಡಿಭಾಗದ ಶಾಲೆಯಾಗಿ ಉತ್ತಮ ಹೆಸರುಗಳಿಸಿ ಸುವರ್ಣ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಭವಿಷ್ಯದಲ್ಲಿ ಬೇಕಾದ ಸವಲತ್ತುಗಳನ್ನು ಸರ್ಕಾರದಿಂದ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.


ಅವರು ತಾಲೂಕಿನ ಗಡಿಭಾಗದ ಹೆಮ್ಮಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಸಂಭ್ರಮ ಕಾರ್ಯಕ್ರಮದ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

    

ಶಾಲಾಭಿವೃದ್ಧಿ ಸಮಿತಿಯಿಂದ ಶಾಲೆಗೆ ಸಿಸಿ ರಸ್ತೆ, ಸ್ಮಾರ್ಟ್ ಕ್ಲಾಸ್, ಅಪೂರ್ಣವಾದ ಶೌಚಾಲಯ ಪೂರ್ಣಗೊಳಿಸುವುದರ ಕುರಿತು ಶಾಸಕರಿಗೆ ಬೇಡಿಕೆ ಸಲ್ಲಿಸಿದ್ದು ಸಿಸಿ ರಸ್ತೆ ಹಾಗೂ ಶೌಚಾಲಯ ಪೂರ್ಣಗೊಳಿಸುವ ಭರವಸೆ ನೀಡಿದರು. ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ತಮ್ಮ ಸಂಸ್ಥೆಯ ವತಿಯಿಂದ ಸ್ಮಾರ್ಟ್ಕ್ಲಾಸ್ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.


ವೇದಿಕೆಯಲ್ಲಿ ಹಿಂದಿನ ಎಸ್.ಡಿ.ಎಂ.ಸಿ ಅಧ್ಯಕ್ಷರೂ, ಪದಾಧಿಕಾರಿಗಳು, ಸದಸ್ಯರು, ಶಾಲೆಯ ನಿವೃತ್ತ ಶಿಕ್ಷಕರು, ಸುವರ್ಣ ಸಂಭ್ರಮ ಕಮಿಟಿಯ ಸದಸ್ಯರು ಹಾಗೂ ಹಿರಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್ ಪಾಟೀಲ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿ ಪಾರಿ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಗ್ರಾ.ಪಂ ಸದಸ್ಯ ಗಣೇಶ ಹೆಗಡೆ, ಸ್ಥಳೀಯ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಇನ್ನಿತರರು ವೇದಕೆಯಲ್ಲಿ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *