Breaking News

ಏಪ್ರಿಲ್ 20 ಕ್ಕೆ ವಜ್ರಳ್ಳಿಯಲ್ಲಿ ನಡೆವ ಸಾವರ್ಕರ್ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಚಿಂತಕ “ಅಜಿತ್ ಹನುಮಕ್ಕನವರ್”

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ: ವೀರ ಸಾವರ್ಕರ್ ಪ್ರತಿಮೆ ಅನಾವರಣ ಸಮಿತಿ ವಜ್ರಳ್ಳಿ ಹಾಗೂ ಸಾವರ್ಕರ್ ವಿಚಾರ ಪ್ರಚಾರ ಸಮಿತಿ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಏ.20 ರಂದು ವಜ್ರಳ್ಳಿಯ ಸರ್ವೋದಯ ಹೈಸ್ಕೂಲ್ ಮೈದಾನದಲ್ಲಿ ಪುಸ್ತಕ ಬಿಡುಗಡೆ, ಉಪನ್ಯಾಸ ಹಾಗೂ ಬೆಳದಿಂಗಳ ಊಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿಯ ಸಂಚಾಲಕ ವಿ.ಎನ್.ಭಟ್ ವಜ್ರಳ್ಳಿ ತಿಳಿಸಿದರು.


ಅವರು ಶನಿವಾರ ಪಟ್ಟಣದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.


`ವಜ್ರಳ್ಳಿಯಲ್ಲಿ ಸ್ವಾತಂತ್ರವೀರ ಸಾವರ್ಕರ್ ಅವರ ಪ್ರತಿಮೆ ಸ್ಥಾಪನೆಯಾಗಬೇಕು, ಅವರ ವಿಚಾರವನ್ನು ತಾಲ್ಲೂಕಿನ ಮನೆ ಮನೆಗೆ ತಲುಪಿಸಬೇಕು; ಆ ಮೂಲಕ ಯುವಕರಲ್ಲಿ ದೇಶಾಭಿಮಾನ ಮೂಡಿಸಬೇಕು ಎಂಬುದು ಸಮಿತಿಯ ಉದ್ದೇಶ. ಸಮಿತಿ ಈ ನಿಟ್ಟಿನಲ್ಲಿ ಉಪನ್ಯಾಸ, ಸಾವರ್ಕರ್ ಸಂದೇಶದ ಕಿರು ಹೊತ್ತಿಗೆ ಪ್ರಕಟಣೆ ಮುಂತಾದ ಅನೇಕ ಕಾರ್ಯಯೋಜನೆ ಹಮ್ಮಿಕೊಂಡಿದೆ’ ಎಂದು ಹರಿಪ್ರಕಾಶ್ ಕೋಣೆಮನೆ ವಿವರಿಸಿದರು.


ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಗಣಪತಿ ಭಟ್ , ಹರಿಪ್ರಕಾಶ ಕೋಣೆಮನೆ , ಎನ್ ಎಸ್ ಹೆಗಡೆ ಕರ್ಕಿ , ಪತ್ರಕರ್ತ ಅಜಿತ್ ಹನುಮಕ್ಕನವರ್, ರಾಮಕೃಷ್ಣ ಹೆಬ್ಬಾರ ಭಾಗವಹಿಸಲಿದ್ದಾರೆ ಎಂದು ಸಮಿತಿಯವರು ಮಾಹಿತಿ ನೀಡಿದರು.
ಲೇಖಕ ಹರಿಪ್ರಕಾಶ ಕೋಣೇಮನೆ, ಸಮಿತಿಯ ಕಾರ್ಯದರ್ಶಿ ಮಹೇಶ ಗಾಂವ್ಕರ, ಪ್ರಮುಖರಾದ ಪ್ರಸಾದ ಹೆಗಡೆ, ಗಣಪತಿ ಮಾನಿಗದ್ದೆ, ವಿಶ್ವನಾಥ ಹಳೆಮನೆ ಇದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *