Breaking News

ಮಾನವ ಕುಲಕ್ಕೆ ವಿಶೇಷ ಘನತೆ ತಂದುಕೊಟ್ಟಂತಹ ಭಾರತ ಕಂಡ ದಾರ್ಶನಿಕ ಡಾ,ಬಾಬಾ ಸಾಹೇಬ್ ಅಂಬೇಡ್ಕರ್-ಹೆಬ್ಬಾರ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಕೇವಲ ಒಂದು ಸಮುದಾಯಕ್ಕೆ ಸೀಮಿತರಾಗದೆ ವಿಶ್ವಕ್ಕೆ ಮನುಕುಲದ ಸಮಾನತೆಯ ಸಂದೇಶ ಸಾರಿದ ಮಹಾನ್ ಪುರುಷ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಾಗಿದ್ದು ಪ್ರತಿ ಭಾರತೀಯರ ಪ್ರೇರಣಾ ಪುರುಷರಾಗಿದ್ದಾರೆ. ಡಾ, ಬಾಬು ಜಗಜೀವನರಾಮ್ ಜೀವನ ನಮ್ಮೆಲ್ಲರಿಗು ಪ್ರೇರಣೆ ಜಾತ್ಯಾತೀತ ವ್ಯವಸ್ಥೆಯಲ್ಲಿ ಜಗತ್ತಿಗೆ ಭಾರತವನ್ನು ತೆರೆದಿಟ್ಟ ಮಹಾನ್ ಚೇತನರ ಕಾರ್ಯಗಳು ನಮಗೆ ಆದರ್ಶವಾಗಲಿ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.


     ಅವರು ಪಟ್ಟಣದ ಗಾಂಧಿ ಕುಟಿರದಲ್ಲಿ ನಡೆದ  ಡಾ,ಬಿ.ಆರ್, ಅಂಬೇಡ್ಕರ್ ಅವರ 134 ನೆ ಜಯಂತಿ ಆಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.


   ವೇದಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.


   ಡಾ,ಬಿ.ಆರ್.ಅಂಬೇಡ್ಕರ್ ಮತ್ತು ಡಾ,ಬಾಬು ಜಗಜೀವನರಾಮ್ ಅವರ ಕುರಿತಂತೆ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಡಿ.ಕೆ.ಗಾಂವ್ಕರ್ ಮತ್ತು ಶಿಕ್ಷಕ ನವೀನ್ ಕುಮಾರ್ ಉಪನ್ಯಾಸ ನೀಡಿದರು.


    ವೇದಿಕೆಯಲ್ಲಿ ತಹಶಿಲ್ದಾರ ಯಲ್ಲಪ್ಪ ಗೊಣೆಣ್ಣವರ, ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ, ಪಟ್ಟಣ ಪಂಚಾಯತ ಉಪಾಧ್ಯಕ್ಷ ಅಮಿತ್ ಅಂಗಡಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಚಂದ್ರ ಗೋಳಾ, ಭೋವಿ ಸಮಾಜದ ಪ್ರಮುಖ ಪಕೀರಪ್ಪ ಭೋವಿ ವಡ್ಡರ್, ಪ.ಪಂ. ಮಾಜಿ ಉಪಾಧ್ಯಕ್ಷೆ ಶಾಮಲಿಪಾಟಣ್ಕರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಭಟ್ ಮೆಣಸುಪಾಲ್ ಉಪಸ್ಥಿತರಿದ್ದರು.


   ವಿದ್ಯಾರ್ಥಿನಿ‌ಯರು ಪ್ರಾರ್ಥಿಸಿ ನಾಡಗೀತೆ ಹಾಡಿದರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜೆ.ಬಿ.ನರೊಟ್ಟಿ ಸ್ವಾಗತಿಸಿದರು. ಶಿಕ್ಷಕ ಚಂದ್ರಹಾಸ ನಾಯ್ಕ ನಿರೂಪಿಸಿದರು.


    ಇದಕ್ಕು ಮುನ್ನ ಪಟ್ಟಣದ ಗಾಂಧಿ ಕುಟಿರದಿಂದ ಸಂವಿಧಾನ ಶಿಲ್ಪಿ ಡಾ||ಬಿಆರ್. ಅಂಬೇಡ್ಕರ್ ಮತ್ತು ಡಾ|| ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ ಮೆರವಣಿಗೆ ಆಯೋಜಿಸಲಾಗಿತ್ತು.


    ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಅಂಬೇಡ್ಕರ್ ಮತ್ತು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಅಂಬೇಡ್ಕರ್ ಭಾವಚಿತ್ರ ಹೊತ್ತ ವಾಹನವನ್ನು ತಾವೆ ಚಾಲನೆ ಮಾಡುವ ಮೂಲಕ ಉದ್ಘಾಟಿಸಿದರು.


    ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಾಗಿ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಅಂಬೇಡ್ಕರ್ ಸೇವಾ ಸಂಘ ಮತ್ತು ವಿವಿಧ ಸಂಘಟನೆಗಳ ಅಡಿಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಮತ್ತು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ  ಸೇರಿದಂತೆ ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಮುಂದೆ ಸಾಗಿ ಗಾಂಧಿ ಕುಟಿರದಲ್ಲಿ ಸಮಾಪ್ತಿಯಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *