Breaking News

ಕಿರವತ್ತಿಯಲ್ಲಿ ಶ್ರದ್ದೆ ಭಕ್ತಿ ಯಿಂದ ಪ್ರಭು ಏಸುವಿನ ಪ್ರಾರ್ಥನೆ – ಗುಡ್ ಫ್ರೈಡೇ ಆಚರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ಕ್ರೈಸ್ತರ ಪರಮ ಪವಿತ್ರ ದಿನಗಳಲ್ಲಿ ಒಂದಾದ “ಗುಡ್ ಫ್ರೈಡೇ” ಶ್ರದ್ಧಾ ಭಕ್ತಿಗಳಿಂದ ಏಸುವಿನ ಪ್ರಾರ್ಥನೆಯೊಂದಿಗೆ ಕಿರವತ್ತಿಯ ಸಂತ ಜೋಸೆಫರ ದೇವಾಲಯದಲ್ಲಿ ಆಚರಿಸಲಾಯಿತು.


ಫಾ.ಮೈಕೇಲ್ ಪಿಂಟೋ ಧರ್ಮಗುರುಗಳ ನೇತೃತ್ವದಲ್ಲಿ ಏಸುವಿಗೆ ಮರಣ ದಂಡನೆ ವಿಧಿಸಿದ ಚಿತ್ರಪಟವನ್ನು ಹಿಡಿದು ಶಿಲುಬೆಯೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಗುಡ್ ಫ್ರೈಡೇ ಪವಿತ್ರ ಸಂದೇಶವನ್ನು ಸಾರಲಾಯಿತು.


ಈ ಸಂದರ್ಭದಲ್ಲಿ ಕ್ರೈಸ್ತ ಧರ್ಮದ ಕುಟುಂಬ ವರ್ಗದವರು , ಸಮುದಾಯದ ಹಿರಿಯರು, ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡು ಪ್ರಾರ್ಥಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *