Breaking News

ಯಲ್ಲಾಪುರ ವಿಶ್ವದರ್ಶನ ಕನ್ನಡ ಮಾದ್ಯಮ ಪ್ರೌಢಶಾಲೆ ಎಸ್.ಎಸ್.ಎಲ್.ಸಿ 90% ಫಲಿತಾಂಶ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : 2024-25 ನೆ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ 94 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, 90% ಫಲಿತಾಂಶ ಸಾಧಿಸಿದೆ.7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿಯೂ, 44 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿಯೂ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿಯೂ ತೇರ್ಗಡೆ ಹೊಂದಿದ್ದಾರೆ.


ವಿನಯ ವೆಂಕಟೇಶ ಭಟ್ಟ (614) 98.24 % ಪ್ರಥಮ, ಸಿಂಚನಾ ನರಸಿಂಹ ಭಟ್ಟ (591)94.96 % ದ್ವಿತೀಯ, ನಯನಾ ಉದಯ ಬಾಂದೇಕರ (585) 93.6 % ತೃತೀಯ ಸ್ಥಾನ, ತೇಜಸ್ವಿನಿ ಶ್ರಿಕಾಂತ ಗೌಡ (583) 93.2 %, ಎನ್.ಮಧುರಾ (579) 92.6% ಗಳಿಸಿ, ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಕಾರ್ಯದರ್ಶಿ ನರಸಿಂಹ ಕೋಣೆಮನೆ, ಮುಖ್ಯಾಧ್ಯಾಪಕಿ ಮುಕ್ತಾ ಶಂಕರ ಹಾಗೂ ಶಿಕ್ಷಕ ವೃಂದ, ಆಡಳಿತ ಮಂಡಳಿಯ ಎಲ್ಲ ಸದಸ್ಯರು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *