Breaking News

ಯಲ್ಲಾಪುರಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – ಸ್ವಾಗತಿಸಿ ಗೌರವಿಸಿದ ಶಾಸಕ ಹೆಬ್ಬಾರ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಅನ್ಯ ಕಾರ್ಯಕ್ರಮದ ನಿಮಿತ್ತ ಯಲ್ಲಾಪುರ ಪಟ್ಟಣಕ್ಕೆ ಭೇಟಿನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಶಾಸಕ ಶಿವರಾಮ ಹೆಬ್ಬಾರ್ ಹೂಗುಚ್ಚ ನೀಡಿ ಸ್ವಾಗತಿಸಿದರು.


ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕೆಲ ಕಾಲ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ಕ್ಷೇತ್ರದ ಪರವಾಗಿ ಶಾಸಕ ಹೆಬ್ಬಾರ್ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿ ಗೌರವಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ , ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷ ಉಲ್ಲಾಸ್ ಶಾನಭಾಗ, ಪಟ್ಟಣ ಪಂಚಾಯತ ಅಧ್ಯಕ್ಷೆ ನರ್ಮದಾ ನಾಯ್ಕ, ಪ್ರಮುಖರಾದ ವಿ.ಜಿ.ಭಾಗ್ವತ್, ಮುರಳಿ ಹೆಗಡೆ, ಶಿರೀಷ್ ಪ್ರಭು,ಮಹಿಳಾ ಕಾಂಗ್ರೆಸ್ ನ ಪೂಜಾ ನೇತ್ರೆಕರ್,ಸರಸ್ವತಿ ಗುನಗಾ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *