Breaking News

“ಸ್ಪೋರ್ಟ್ಸ್ ಕ್ಲಬ್ ಯಲ್ಲಾಪುರ” ಅರ್ಪಿಸುವ ಏಕದಿನ ವಾಲಿಬಾಲ್ ಪಂದ್ಯಾವಳಿ.!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ತಾಲೂಕಿನ ಅತ್ಯಂತ ಹಳೆಯ ಸ್ಪೋರ್ಟ್ಸ್ ಕ್ಲಬ್‌ಗಳಲ್ಲಿ ಒಂದಾದ “ಸ್ಪೋರ್ಟ್ಸ್ ಕ್ಲಬ್, ಯಲ್ಲಾಪುರ” ವತಿಯಿಂದ ಮೇ 18 ರ ರವಿವಾರ ಒಂದು ದಿನದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸ್ಪೋರ್ಟ್ಸ್ ಕ್ಲಬ್ ಕಮಿಟಿಯ ಪದ್ಮನಾಭ ಶಾನಭಾಗ ಮಾಹಿತಿ ನೀಡಿದ್ದಾರೆ.


ಬೆಳೆಯುತ್ತಿರುವ ಜಗತ್ತಿನೊಂದಿಗೆ ಮೊಬೈಲ್, ಇಂಟರ್‌ನೆಟ್, ಟಿವಿಗಳ ಭರಾಟೆಯಲ್ಲಿ ಕ್ರೀಡೆ ನಶಿಸುತ್ತಿದ್ದು ಮಕ್ಕಳು, ಯುವಜನತೆಯಲ್ಲಿ ಕ್ರೀಡಾ ಜಾಗೃತಿ ಮೂಡಿಸುವ ಸಲುವಾಗಿ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. 5೦೦೦ರೂ ಪ್ರಥಮ ಬಹುಮಾನ, 25೦೦ ದ್ವಿತೀಯ, 1೦೦೦ರೂ ತೃತೀಯ ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಉತ್ತಮ ಲಿಫ್ಟರ್, ಶೂಟರ್ ಹಾಗೂ ಪಂದ್ಯ ಪುರುಷೋತ್ತಮ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದು. ಉತ್ತಮವಾಗಿ ಆಡುವ ಆಟಗಾರರನ್ನು ಆರಿಸಿ ತಾಲೂಕು ತಂಡವನ್ನು ರಚಿಸಲಾಗುವುದು.


ಪಂದ್ಯಗಳು ವೈ.ಟಿ.ಎಸ್.ಎಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ತಂಡಗಳು ಮೇ 18 ರ ಬೆಳಿಗ್ಗೆ ಹಾಜರಿರಬೇಕು. ರೂ.3೦೦ ಪ್ರವೇಶ ಶುಲ್ಕವಿದ್ದು ಬೆಳಗಿನ ಉಪಹಾರ ಹಾಗೂ ಮದ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಯಲ್ಲಾಪುರ ತಾಲೂಕಿನ ಆಟಗಾರರಿಗೆ ಮಾತ್ರ ಪ್ರವೇಶವಿದ್ದು ಆಧಾರ ಕಾರ್ಡ್ ಕಡ್ಡಾಯವಾಗಿದೆ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿದ್ದು ತಂಡದ ಹೆಸರು ನೀಡಲಿಚ್ಚಿಸುವವರು ರಮೇಶ್ ಕಾಮತ್ ದೂ.ಸಂ: 9448957010, ಪದ್ಮನಾಭ ಶಾನಭಾಗ – 7338323077 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *