Breaking News

ಗಟಾರ ತುಂಬಿ ಗಬ್ಬು ನಾರುತ್ತಿದೆ ಯಾರಿಗೇಳೋದು ನಮ್ಮ ಸಮಸ್ಯೆ.?

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ತಾಲೂಕಿನ ಗುಳ್ಳಪುರದಲ್ಲಿ ಗ್ರಾಮ ಪಂಚಾಯತ್ ಇದ್ದು ಇಲ್ಲದಂತಾಗಿದೆ.
ರಾಮನಗರ ದೇವಿಕಟ್ಟೆ ರೋಡಿನ ಅಂಚಿನಲ್ಲಿರುವ ಗಟಾರ ಕಸ ಕಡ್ಡಿ ತ್ಯಾಜ್ಯಗಳಿಂದ ತುಂಬಿ ಗಬ್ಬು ನಾರುತ್ತಿದ್ದು ಸುತ್ತಮುತ್ತಲಿನ ಜನ ಮೂಗು ಮುಚ್ಚಿ‌ ತಿರುಗುವ ಪರಿಸ್ಥಿತಿ ಎದುರಾಗಿದೆ.


ಸಮಸ್ಯೆ ಪಂಚಾಯ್ತಿ ಅಧಿಕಾರಿಗಳ ಗಮನಕ್ಜೆ ತಂದರು ಸಹ ಸರಿಯಾದ ಗಮನ ಹರಿಸುತ್ತಿಲ್ಲ.
ಬೇಸರದ ಸಂಗತಿ ಏನೆಂದರೆ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಹ ಇದೆ ಗ್ರಾಮದವರಗಿದ್ದು ಅಧಿಕಾರಿಗಳು ಅವರ ಮಾತನ್ನು ಕೇಳುತಿಲ್ಲವೇನೊ ಅಥವಾ ಅವರ ಕಣ್ಣಿಗೆ ಈ ಸಮಸ್ಯೆ ಕಾಣಿಸುತ್ತಿಲ್ಲವೇನೊ ಎಂಬ ಅನುಮಾನ ಕಾಡುತ್ತಿದೆ.

ಈಗಾಗಲೇ ಎಲ್ಲೆಡೆ ಕರೋನ ಡೆಂಗ್ಯೂ ಮುಂತಾದ ಭಯಾನಕ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ ಎಂಬ ಮಾಹಿತಿ ಇದ್ದು ಪುಟ್ಟ ಮಕ್ಕಳು, ಮಹಿಳೆಯರು, ಗರ್ಭಿಣಿಯರು, ವಯೋ ವೃದ್ದರು ಪ್ರತಿನಿತ್ಯ ಕೊಳಚೆಯಿಂದ ನರಕ ಅನುಭವಿಸುತ್ತಿದ್ದು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸುತ್ತೇನೆ.
ಮಹೇಶ್ ಕೃಷ್ಣನಾಯ್ಕ್ ಉಪಾಧ್ಯಕ್ಷ
ತಾಲೂಕು ಯೂಥ್ ಕಾಂಗ್ರೆಸ್
ಯಲ್ಲಾಪುರ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *