Breaking News

ಹೆದ್ದಾರಿ ಗುಂಡಿಗಳನ್ನು ಮುಚ್ಚಿ ಇಲ್ಲ ಅಲ್ಲೊಂದು ಗಿಡ ಹಚ್ಚಿ – ಅಹಿಂದ ದ್ಯಾಮಣ್ಣ ಬೋವಿ ವಡ್ಡರ್ ಎಚ್ಚರಿಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಪಟ್ಟಣದಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಅತ್ಯಂತ ಕಳಪೆಯಾಗಿದ್ದು ಇತ್ತೀಚೆಗೆ ವಿಪರೀತ ಹೊಂಡಗುಂಡಿಗಳಿಂದ ಅಪಾಯಕಾರಿಯಾಗಿ ಪರಿಣಮಿಸಿದ್ದು ಬಲಿಗಾಗಿ ಬಾಯ್ತೆರೆದು ಕಾದಂತಿದೆ.

ಬಹುತೇಕ ಮಾದ್ಯಮಗಳಲ್ಲಿ ಈ ಸಮಸ್ಯೆ ಬಹಳಷ್ಟುಬಾರಿ ಬಂದಿರುವುದನ್ನು ಗಮನಿಸಿದ್ದೇನೆ ಆದರು ದುರಸ್ತಿ ಮಾಡದಿರುವುದು ದುರಂತವಾಗಿದೆ. ನಮ್ಮ ತೆರಿಗೆ ಹಣ ಸಮರ್ಪಕವಾಗಿ ಬಳಸಿ ಮೂಲಭೂತ ಸೌಕರ್ಯಗಳ ಒದಗಿಸಿ ಇಲ್ಲವಾದರೆ ತೆರಿಗೆ ಹಣ ನಮಗೆ ಕೊಡಿ ನಮ್ಮ ವ್ಯವಸ್ಥೆ ನಾವೆ ಮಾಡಿಕೊಳ್ಳುತ್ತೇವೆ ಎಂದು ಅಖಿಲ ಕರ್ನಾಟಕ ಅಹಿಂದ ವೇದಿಕೆ ಜಿಲ್ಲಾಧ್ಯಕ್ಷ ಅಹಿಂದ ದ್ಯಾಮಣ್ಣ ಬೋವಿ ವಡ್ಡರ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.



ಹೆದ್ದಾರಿ ಬಹುತೇಕ ಕಡೆಯಲ್ಲಿ ಪ್ರಾಣಕಂಟಕ ಗುಂಡಿಗಳಿದ್ದು ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಿದೆ ಅಲ್ಲದೆ ಗುಂಡಿ ತಪ್ಪಿಸುವ ಭರದಲ್ಲಿ ಅದೆಷ್ಟೋ ಅಪಘಾತಗಳಾಗುತ್ತಿದ್ದು ಇದಕ್ಕೆ ಹೆದ್ದಾರಿ ನಿರ್ವಹಣೆ ನೇರ ಜವಾಬ್ದಾರರಾಗಲಿದ್ದಾರೆ.


ರಸ್ತೆ ಸುರಕ್ಷತೆ ಮತ್ತು ಸಂಚಾರಕ್ಕೆ ಸಂಬಂಧಿಸಿದಂತೆ ರಸ್ತೆಗಳಲ್ಲಿನ ಹೊಂಡಗುಂಡಿಗಳಿಂದ ಅಪಘಾತ ಸಂಭವಿಸಿ ಆಗುವ ಹಾನಿಗೆ ಸಂಬಂಧಿಸಿದ ಇಲಾಖೆ,ಗುತ್ತಿಗೆದಾರ,ಏಜೆನ್ಸಿ ನೇರ ಹೊಣೆಯಾಗಲಿದ್ದು ಆರ್.ಎಂ.ಎ ಕಾಯ್ದೆ ಅನ್ವಯ 198 (ಎ) ಮೊಟಾರು ವಾಹನ ಕಾಯ್ದೆ 1988 ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದ್ದು ತಪ್ಪಿತಸ್ತರ ವಿರುದ್ದ ಕ್ರಮ ಜರುಗಿಸಬಹುದಾಗಿದೆ.


ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಅಹಿಂದ ವೇದಿಕೆ ಅಡಿಯಲ್ಲಿ ಹೆದ್ದಾರಿಯಲ್ಲಿ ವನಮಹೋತ್ಸವ ಆಚರಿಸಿ ಪ್ರತಿಭಟಿಸಲಾಗುವುದು ಮತ್ತು ದೂರು ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *