Breaking News

ಯಲ್ಲಾಪುರ ಜೇನುಕಲ್ಲು ಗುಡ್ಡದಿಂದ ಹಾರಿ ಪ್ರಾಣಬಿಟ್ಟ ಯುವಕ..


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾದ ಜೇನುಕಲ್ಲು ಗುಡ್ಡದಿಂದ ಯುವಕನೋರ್ವ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಧಾರವಾಡ ಮೂಲದ ಶ್ರೀನಿಧಿ ಕೃಷ್ಣ ಕಡಕೋಳ(೨೩) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಫೆ.೪ರಂದು ಗೋಕರ್ಣಕ್ಕೆ ಹೋಗಿಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿ ಪ್ರಯಾಣ ಬೆಳೆಸಿದ್ದಾನೆ. ನಂತರ ಸಂಪರ್ಕಕ್ಕೆ ಸಿಗದಾದಾಗ ಪೋಷಕರು ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ತನಿಖೆಗಿಳಿದ ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಯಲ್ಲಾಪುರಕ್ಕೆ ಬಂದ ನಂತರ ಪೋನ್ ಸ್ವಿಚ್ ಆಫ್ ಆಗಿರುವುದಾಗಿ ತಿಳಿದು ಬಂದಿದೆ. ಇದೇ ಸಮಯದಲ್ಲಿ ಜೇನುಕಲ್ಲು ಗುಡ್ಡಕ್ಕೆ ತರಳುವ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿರುವ ಮಾಹಿತಿ ದೊರೆತಿದ್ದು ಸುತ್ತಮುತ್ತಲೂ ಹುಡುಕಾಟ ನಡೆಸಿ ಶನಿವಾರ ಮುಂಜಾನೆ ಗುಡ್ಡದ ಕೆಳಭಾಗದಲ್ಲಿ ಮೃತದೇಹವೊಂದು ಪತ್ತೆಯಾಗಿದೆ.

ಕಡಿದಾದ ಗುಡ್ಡದ ಕೆಳಭಾಗಕ್ಕೆ ತೆರಳಿ ಮೃತದೇಹವನ್ನು ಮೇಲಕ್ಕೆ ತರುವುದು ಸಾಹಸ ಕಾರ್ಯವಾಗಿದ್ದು ಯಲ್ಲಾಪುರ ಪಿಐ ರಮೇಶ ಹಾನಾಪುರ ನೇತೃತ್ವದಲ್ಲಿ ಪಿಐ ಸಿದ್ದು ಗುಡಿ , ಸಿಬ್ಬಂದಿಗಳಾದ ಪ್ರವೀಣ, ನೀಲಪ್ಪ, ಶಫಿ ಮತ್ತು ಅಗ್ನಿಶಾಮಕ ದಳದ ಸುಧೀರ್ ಹಾಗೂ ಸಿಬ್ಬಂದಿಗಳು ಅರಣ್ಯ ಇಲಾಖೆಯ ಸಂತೋಷ ಮತ್ತು ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಶವವನ್ನು ಹೊತ್ತು ಮೇಲಕ್ಕೆ ಸಾಗಿಸಲಾಯಿತು.

ನಂತರ ಧಾರವಾಡ ಮೂಲದ ಕಾಣೆಯಾದ ಶ್ರೀನಿಧಿ ಕಡಕೋಳ ಎಂಬ ಯುವಕನ ಮೃತದೇಹವೆಂದು ತಿಳಿದು ಬಂದಿದ್ದು ಮೃತದೇಹವನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರ ಖಾತೆಗೆ ಎರಡನೇ ಕಂತಿನ ಬೆಳೆ ವಿಮೆ ಜಮೆ ಆರಂಭ.

ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ‘ಹವಾಮಾನ ಆಧಾರಿತ ಬೆಳೆ …

Leave a Reply

Your email address will not be published. Required fields are marked *