Breaking News

ವಿಶ್ವದ ವೇದಿಕೆಯಲ್ಲಿ ಮತ್ತೆ ಮೆರೆಯಿತು ಭಾರತದ ತ್ರಿವರ್ಣ ಧ್ವಜ 🇮🇳 – ಶಿವರಾಮ್ ಹೆಬ್ಬಾರ್

ಪ್ರತಿಧ್ವನಿ ಯಲ್ಲಾಪುರ : 20/20 ವಿಶ್ವಕಪ್ ಜಯಗಳಿಸುವ ಮೂಲಕ ಕೋಟ್ಯಾಂತರ ಭಾರತೀಯರ ಕನಸನ್ನು ನನಸು ಮಾಡಿದ ಟೀಮ್ ಇಂಡಿಯಾ ಆಟಗಾರರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕ್ರೀಡಾಪ್ರೇಮಿ ಶಿವರಾಮ ಹೆಬ್ಬಾರ್ ಟೀಂ ಇಂಡಿಯಾ ಆಟಗಾರರಿಗೆ ಅಭಿನಂದಿಸಿದ್ದಾರೆ‌.

ನಿಮ್ಮ ಪರಿಶ್ರಮ ಮತ್ತು ಸಮರ್ಪಣೆಯಿಂದ ಭಾರತಕ್ಕೆ ಈ ಮಹತ್ವದ ವಿಶ್ವಕಪ್ ಕಿರೀಟ ದೊರೆತಿದೆ. ದೇಶವೇ ನಿಮ್ಮ ಮೇಲೆ ಹೆಮ್ಮೆಪಡುತ್ತಿದೆ ಎಂದು ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ ಫೈನಲ್ ಪಂದ್ಯದಲ್ಲಿ ಭಾರತ ಸತತ ಎರಡನೇ ಬಾರಿ ವಿಶ್ವಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಭಾರತ ಹೊಸ ಇತಿಹಾಸ ಬರೆದಿದೆ. ನ್ಯೂಜಿಲೆಂಡ್‌ ವಿರುದ್ಧ 96 ರನ್‌ಗಳಿಂದ ಗೆದ್ದ ಭಾರತ ಮೂರನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಇತಿಹಾಸ ನಿರ್ಮಿಸಿದೆ.


ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಭಾರತ 5 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲನ್ನು ಒಪ್ಪಿಕೊಂಡಿತು. ಸತತವಾಗಿ ಎರಡು ಟಿ20 ಫೈನಲ್ ಪಂದ್ಯವನ್ನು ಯಾವುದೇ ತಂಡ ಜಯಗಳಿಸಿಲ್ಲ. ಆದರೆ ಭಾರತ 2024 ಮತ್ತು 2026 ರಲ್ಲಿ ಜಯಗಳಿಸುವ ಮೂಲಕ ಸತತ ಎರಡನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.


ಟಿ20 ವಿಶ್ವಕಪ್ ಆತಿಥ್ಯ ವಹಿಸಿದ ತಂಡ ಇಲ್ಲಿಯವರೆಗೆ ಚಾಂಪಿಯನ್‌ ಪಟ್ಟ ಅಲಂಕರಿಸಿರಲಿಲ್ಲ. ಈ ಬಾರಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಟೂರ್ನಿಯನ್ನು ಆಯೋಜಿಸಿತ್ತು. ಇಲ್ಲಿಯವರೆಗೆ ಯಾವುದೇ ತಂಡ 3 ಟಿ20 ವಿಶ್ವಕಪ್ ಪಂದ್ಯ ಗೆದ್ದಿರಲಿಲ್ಲ. ಆದರೆ 2008, 2024 ಮತ್ತು 2026 ರಲ್ಲಿ ಜಯಿಸುವ ಮೂಲಕ ಭಾರತ ವಿಶ್ವದಾಖಲೆ ಬರೆದಿದೆ. ಇಂಗ್ಲೆಂಡ್ 2010, 2022 ರಲ್ಲಿ ಟ್ರೋಫಿ ಗೆದ್ದರೆ ವೆಸ್ಟ್ ಇಂಡೀಸ್ 2012 ಮತ್ತು 2016 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಸಂಜು ಸ್ಯಾಮ್ಸನ್ ಮತ್ತೆ ಹೀರೋ ಆದರು. ಬುಮ್ರಾ 4 ವಿಕೆಟ್ ಪಡೆದು ಸಾಧನೆ ಮಾಡಿದರು. ಇಡೀ ದೇಶ ಈಗ ಸಂಭ್ರಮದಲ್ಲಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರ ಖಾತೆಗೆ ಎರಡನೇ ಕಂತಿನ ಬೆಳೆ ವಿಮೆ ಜಮೆ ಆರಂಭ.

ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ‘ಹವಾಮಾನ ಆಧಾರಿತ ಬೆಳೆ …

Leave a Reply

Your email address will not be published. Required fields are marked *