Breaking News

ಕಾರ್ಕೊಂಡಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಝನ್ ಒನ್ ಉದ್ಘಾಟಿಸಿದ ವಿಜಯ್ ಮಿರಾಶಿ.


ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕೊಂಡಿ ಗ್ರಾಮದಲ್ಲಿ ಪ್ರಥಮ ಬಾರಿಗೆ ” ಕಾರ್ಕೊಂಡಿ ಕ್ರಿಕೆಟ್ ಪ್ರೀಮಿಯರ್ ಲೀಗ್” ಚುಟುಕು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು ಆ ಭಾಗದ ನಾಯಕ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರೆಹಮತ್ ಅಬ್ಬಿಗೆರೆ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದು ತಂಡಗಳಿಗೆ ಶುಭ ಕೋರಿದರು.


ಕೆಸಿಪಿಎಲ್- ಸೀಝನ್ 1 ನಲ್ಲಿ ಒಟ್ಟು 5 ತಂಡಗಳು ಟ್ರೋಫಿಗಾಗಿ ಸೆಣೆಸಾಟ ನಡೆಸಲಿವೆ. ಗೆದ್ದ ಮೊದಲ ತಂಡಕ್ಕೆ 15 ಸಾವಿರ ನಗದು ಆಕರ್ಷಕ ಟ್ರೋಫಿ, ಎರಡನೆ ತಂಡಕ್ಕೆ 10 ಸಾವಿರ ನಗದು ಆಕರ್ಷಕ ಟ್ರೋಫಿ, ತೃತೀಯ ತಂಡಕ್ಕೆ 7 ಸಾವಿರ ನಗದು ಆಕರ್ಷಕ ಟ್ರೋಫಿ ನೀಡಲಾಗುವುದು.
ವಿಶೇಷವಾಗಿ ಕ್ರೀಡಾ ಪ್ರೋತ್ಸಾಹದ ಹಿನ್ನೆಲೆಯಲ್ಲಿ ಪಂದ್ಯದಲ್ಲಿ ಪಾಲ್ಗೊಂಡ ಎಲ್ಲಾ ಆಟಗಾರರಿಗು ನೆನಪಿನ ಕಾಣಿಕೆ ನೀಡಿ ಗೌವಿಸಲಾಗುವುದು.
ಫೈನಲ್ ಪಂದ್ಯವು ಗುರುವಾರ ನಡೆಯಲಿದ್ದು ಕ್ರಿಕೆಟ್ ಪ್ರೇಮಿಗಳು ಕ್ರೀಡಾ ಪ್ರೋತ್ಸಾಹಕರ ಸಹಕಾರದಲ್ಲಿ ಉತ್ತಮ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟಕರು ಪತ್ರಿಕೆಯೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲೊಂದು ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೆ ಸಾವು- ಹಿಂಬದಿ ಸವಾರನಿಗೆ ಗಂಭೀರ ಗಾಯ.

ಪ್ರತಿಧ್ವನಿ ಯಲ್ಲಾಪುರ : ಪಟದಟಣದ ಹೊರವಲಯ ಮಗೋಡು ಕ್ರಾಸ್ ಸಮೀಪ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ …

Leave a Reply

Your email address will not be published. Required fields are marked *