Breaking News

ಪ್ರತಿಭಟನೆ ಹೆಸರಲ್ಲಿ ಅಂಬೇಡ್ಕರ್ ವೃತ್ತಕ್ಕೆ ಅಪಮಾನ – ಕ್ರಮ ಜರುಗಿಸದಿದ್ದರೆ ಹೋರಾಟದ ಎಚ್ಚರಿಕೆ – ಜಗನ್ನಾಥ ರೇವಣ್ಕರ್.


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ಎಂದೇ ಪರಿಗಣಿಸುವ ಅಂಬೇಡ್ಕರ್ ವೃತ್ತದ ಅಂಬೇಡ್ಕರ್ ಕಟ್ಟೆಗೆ ಕವಳ ಉಗಿದು ಅವಮಾನಿಸಿರುವುದನ್ನು ದಲಿತ ಪ್ರಮುಖ ತೊಗಲು ಹರಳಯ್ಯ ಟ್ರಸ್ಟ್ ಅಧ್ಯಕ್ಷ ಜಗನ್ನಾಥ ರೇವಣ್ಕರ್ ಉಗ್ರವಾಗಿ ಖಂಡಿಸಿರುವುದಲ್ಲದೆ ಸಂಬಂಧಿಸಿದ ಇಲಾಖೆಗಳು ಕ್ರಮಜರುಗಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.


ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಟಿ.ಎಂ.ಎಸ್ ಉಳಿಸಿ ಹೋರಾಟದ ವೇದಿಕೆ ಅಡಿಯಲ್ಲಿ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ವೃತ್ತದ ಮದ್ಯದಲ್ಲಿರುವ ಅಂಬೇಡ್ಕರ್ ಕಟ್ಟೆಗೆ ಕವಳ ತಿಂದು ಉಗುಳಿರುವುದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅಭಿಮಾನಿಗಳಿಗೆ ಅತ್ಯಂತ ಘಾಸಿ ಉಂಟಾಗಿದ್ದು ಈ ಕುರಿತು ತೊಗಲು ಹರಳಯ್ಯ ಟ್ರಸ್ಟ್ ಅಧ್ಯಕ್ಷ ಹಿರಿಯ ದಲಿತ ಮುಖಂಡ ಜಗನ್ನಾಥ ರೇವಣ್ಕರ್ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಯಾವುದೆ ಆಚರಣೆಗಳನ್ನು ಇದೇ ವೃತ್ತದ ಇದೇ ಕಟ್ಟೆಯಮೇಲೆ ನೆರವೇರಿಸುತ್ತಾ ಬಂದಿದ್ದು ಅಂಬೇಡ್ಕರ್ ಅಭಿಮಾನಿಗಳಿಗೆ ಇದೊಂದು ಭಾವನಾತ್ಮಕ ಪವಿತ್ರ ಸ್ಥಳವಾಗಿದೆ. ಇಂತಹ ಸ್ಥಳದಮೇಲೆ ಕವಳ ತಿಂದು ಉಗಿದಿರುವುದು ಖಂಡನಾರ್ಹ.


ಗುರುವಾರ ನಡೆದಿರುವ ಈ ಕೃತ್ಯ ಬೆರೆಲ್ಲಾದರು ನಡೆದಿದ್ದರೆ ಪರಿಸ್ಥಿತಿ ಬೇರೆಯೆ ಆಗಿರುತ್ತಿತ್ತು ಆದರೆ ಶಾಂತಿ ಸೌಹಾರ್ಧತೆಯ ಯಲ್ಲಾಪುರದಂತಹ ಶಾಂತ ಪರಿಸರದಲ್ಲಿ ಸಂಘರ್ಷ ಸಾಧುವಲ್ಲ ತಕ್ಷಣ ಸಂಬಂಧಿಸಿದ ಇಲಾಖೆಗಳು ಜವಾಬ್ದಾರಿ ಹೊತ್ತು ವೃತ್ತ ಶುಚಿಗೊಳಿಸಿ ಹೊರಾಟದ ನೇತೃತ್ವ ವಹಿಸಿದವರ ಮೇಲೆ ಕ್ರಮ ಜರುಗಿಸಬೇಕಿದೆ. ಮುಂದೆ ಇದೇ ಸ್ಥಳದಲ್ಲಿ ಇಂತಹ ಪ್ರತಿಭಟನೆ, ಹೋರಾಟಗಳು ನಡೆಯುವ ಸಂದರ್ಭದಲ್ಲಿ ಅದಕ್ಕಾಗಿ ಪಡೆಯುವ ಅನುಮತಿ ಪತ್ರದಲ್ಲಿ ಇಂತಹ ಕೃತ್ಯಗಳು ಸಂಭವಿಸದಂತೆ ಎಚ್ಚರಿಕೆಯ ನಿರ್ದೇಶನಗಳನ್ನು ನೀಡಬೇಕಿದೆ ಎಂದು ಜಗನ್ನಾಥ ರೇವಣ್ಕರ್ ಪ್ರತಿಧ್ವನಿ ಯಲ್ಲಾಪುರ ನ್ಯೂಸ್ ಗೆ ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲಿ ಮುಗಿಲು ಮುಟ್ಟಿದ ಹಿಂದು ಧರ್ಮದ ಜಯಘೋಷ- ವಿಜ್ರಂಭಣೆಯಿಂದ ಜರುಗಿದ ಯುಗಾದಿ ಉತ್ಸವದ ಶೋಭಾಯಾತ್ರೆ.

ಪ್ರತಿಧ್ವನಿ ಯಲ್ಲಾಪುರ : ಹಿಂದು ಧರ್ಮದ ನೂತನ ವರ್ಷಾರಂಭ ಯುಗಾದಿ ಯಿಂದ ಪ್ರಾರಂಭ ಅದಕ್ಕೆ ಯಲ್ಲಾಪುರದಲ್ಲಿ ವಿಜ್ರಂಭಣೆಯ ಆಚರಣೆ ನಡೆಯುತ್ತಾ …

Leave a Reply

Your email address will not be published. Required fields are marked *