Breaking News

ಸಿಡಿಲ ಅಬ್ಬರಕ್ಕೆ ತೆಂಗಿನ ಮರದಲ್ಲಿ ಬೆಂಕಿ ಯಲ್ಲಾಪುರದ ವಸಂತ ಭವನ ಚಾಳಿನಲ್ಲಿ ನಡೆದ ಘಟನೆ.

ಯಲ್ಲಾಪುರದಲ್ಲಿ ಸಿಡಿಲು ಬಡಿದು ತೆಂಗಿನಮರಕ್ಜೆ ಬೆಂಕಿ ತಕ್ಷಣ ನಂದಿಸಿದ ಅಗ್ನಿಶಾಮಕ ದಳ
     ಪಟ್ಟಣದಲ್ಲಿ ಸಂಜೆ ಇದ್ದಕ್ಕಿದ್ದಂತೆ ಮೋಡ ಕವಿದು ಗುಡುಗು ಸಿಡಿಲು ಆರಂಭವಾಗಿ ತುಂತುರು ಮಳೆ ಹನಿ ಜಿನುಗಿದೆ ಗೋಪಾಲಕೃಷ್ಣ ಗಲ್ಲಿಯ ವಸಂತಭವನ ಚಾಳ್ ನಲ್ಲಿ ತೆಂಗಿನ ಮರ ಒಂದಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿದೆ.
     ತಕ್ಷಣ ಅಲ್ಲೆ ಇದ್ದ ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಕರೆಮಾಡಿದ್ದು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಮುಂದಾಗಬಹುದಾದ ಅನಾಹುತ ತಪ್ಪಿದಂತಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *