Breaking News

ಟಿ.ಎಂ.ಎಸ್ ಉಳಿಸಿ ಹೋರಾಟದ ಉಪವಾಸ ಸತ್ಯಾಗ್ರಹದಲ್ಲಿ ಹಿರಿಯ ಸಹಕಾರಿ ಎನ್.ಕೆ.ಭಟ್ ಅಗ್ಗಾಶಿಕುಂಬ್ರಿ ಅಸ್ವಸ್ಥ – ಸ್ಥಳದಲ್ಲೆ ಚಿಕಿತ್ಸೆ


ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಟಿ.ಎಂ.ಎಸ್ ಆಡಳಿತಾಧಿಕಾರಿ ವಜಾಗೊಳಿಸುವಂತೆ ಶುಕ್ರವಾರ ಮುಂದುವರೆದ ಭಾಗವಾಗಿ ಟಿ.ಎಂ.ಎಸ್ ಮುಂಭಾಗ ಹಿರಿಯ ಸಹಕಾರಿ ಎನ್.ಕೆ.ಭಟ್ ಅಗ್ಗಾಶಿ ಕುಂಬ್ರಿ ನೇತೃತ್ವದಲ್ಲಿ ಹೋರಾಟ ಸಮಿತಿಯ ಪ್ರಮುಖರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು‌ ಸಂಜೆ ವೇಳೆಗೆ ಎನ್.ಕೆ.ಭಟ್ ಅಗ್ಗಾಶಿಕುಂಬ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು ಪೊಲೀಸರ ಸಹಕಾರದಲ್ಲಿ ಆಂಬುಲೆನ್ಸ ಕರೆಸಿ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು ಸತ್ಯಾಗ್ರಹ ಯಾವುದೆ ಕಾರಣಕ್ಕು ನಿಲ್ಲಿಸುವುದಿಲ್ಲ ತಕ್ಷಣವೆ ಆಡಳಿತಾಧಿಕಾರಿ ವಜಾಗೊಳಿಸುವಂತೆ ಹೋರಾಟ ಸಮಿತಿ ಸದಸ್ಯರ ಆಗ್ರಹವಾಗಿದೆ.

ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸುತ್ತಿದ್ದು ಹೆಚ್ಚಿನ ವಿವರ ಇನ್ನಷ್ಟೆ ಲಭಿಸಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲಿ ಮುಗಿಲು ಮುಟ್ಟಿದ ಹಿಂದು ಧರ್ಮದ ಜಯಘೋಷ- ವಿಜ್ರಂಭಣೆಯಿಂದ ಜರುಗಿದ ಯುಗಾದಿ ಉತ್ಸವದ ಶೋಭಾಯಾತ್ರೆ.

ಪ್ರತಿಧ್ವನಿ ಯಲ್ಲಾಪುರ : ಹಿಂದು ಧರ್ಮದ ನೂತನ ವರ್ಷಾರಂಭ ಯುಗಾದಿ ಯಿಂದ ಪ್ರಾರಂಭ ಅದಕ್ಕೆ ಯಲ್ಲಾಪುರದಲ್ಲಿ ವಿಜ್ರಂಭಣೆಯ ಆಚರಣೆ ನಡೆಯುತ್ತಾ …

Leave a Reply

Your email address will not be published. Required fields are marked *