
ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ನ್ಯಾಯಾಲಯದ ಆವರಣದಲ್ಲಿ ಮಾ,14 ರಂದು ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು.

ಲೋಕ್ ಅದಾಲತ್‌ನಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಕುಮಾರ್ ಎಸ್ ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ದಾಖಲಾದ ಒಟ್ಟು 64 ಪ್ರಕರಣಗಳಲಿ ಒಟ್ಟು 53 ಪ್ರಕರಣಗಳು ಇತ್ಯರ್ಥವಾದವು. ಇದರಿಂದ ಸರ್ಕಾರಕ್ಕೆ 1,67,81,627 -00 ರೂ ಭರಣ ಮಾಡಲಾಯಿತು.

ಗೌರವಾನ್ವಿತ ಸಿವಿಲ್ ನ್ಯಾಯಾಧೀಶರಾದ ಅನಿತಾ ಕುಮಾರಿ . ಎಸ್ ಅವರು ಸಿವಿಲ್ ನ್ಯಾಯಾಲಯದಲ್ಲಿ ದಾಖಲಾದ ಮತ್ತು 314 ಪ್ರಕರಣಗಳಲ್ಲಿ 228 ಪ್ರಕರಣಗಳನ್ನು ಇತ್ಯರ್ಥಪಡಿಸಿದರು. ಇದರಿಂದ ಸರ್ಕಾರಕ್ಕೆ 35,54,638-00 ರೂ ಭರಣ ಮಾಡಲಾಯಿತು.

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸಂಧಾನಕಾರರಾಗಿ ವಕೀಲರಾದ ಗಣಪತಿ ಎಸ್ ಭಟ್ಟ, ಸಿವಿಲ್ ನ್ಯಾಯಾಲಯದಲ್ಲಿ ಸಂಧಾನಕಾರರಾಗಿ ವಕೀಲರಾದ ಸುಬಾಷ್ ಸಿ ಭಟ್ಟ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಭಟ್ಟ, ಅಪರ ಸರ್ಕಾರಿ ವಕೀಲರಾದ ಎನ್.ಟಿ.ಗಾಂವ್ಕರ್, ಸಹಾಯಕ ಸರಕಾರಿ ಅಭಿಯೋಜಕಿ ಝೀನತ್ ಬಾನು ಶೇಖ್ ಹಾಗು ಎಲ್ಲಾ ವಕೀಲರು, ಸೊಸೈಟಿ ಹಾಗೂ ಬ್ಯಾಂಕಿನ ಅಧಿಕಾರಿಗಳು, ಕಕ್ಷಿದಾರರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದು ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಗೊಳಿಸಿದರು.




Prathidvani Yellapura