Breaking News

ನಾಳೆಯಿಂದ ವಿದ್ಯಾರ್ಥಿ ದಿಸೆಯ ಪ್ರಮುಖ ಘಟ್ಟ “ಎಸ್.ಎಸ್.ಎಲ್.ಸಿ” ಪರಿಕ್ಷೆ ಪ್ರಾರಂಭ- ಸಿದ್ದತೆಯಲ್ಲಿ ಶಿಕ್ಷಣ ಇಲಾಖೆ.


ಪ್ರತಿಧ್ವನಿ ಯಲ್ಲಾಪುರ : ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಕರೆಯುವ ಎಸ್.ಎಸ್.ಎಲ್‌.ಸಿ ಪರೀಕ್ಷಗಳು ಬುಧವಾರದಿಂದ ಆರಂಭಗೊಳ್ಳಲಿದ್ದು ಪರೀಕ್ಷೆ ಕಾರ್ಯದ ಪೂರ್ವ ತಯಾರಿ ಸಂಪೂರ್ಣಗೊಂಡು ಅಂತಿಮ ಹಂತದ ಕೆಲಸಗಳು ನಡೆಸಲಾಗುತ್ತಿದೆ.


ಯಲ್ಲಾಪುರ ತಾಲೂಕಿನಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಿದ್ದು 986 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾ,18-ಕ‌ನ್ನಡ, 23-ವಿಜ್ಞಾನ, 25-ದ್ವಿತೀಯ ಭಾಷೆ, 28-ಗಣಿತ, 30-ತೃತಿಯ ಭಾಷೆ, ಏ,2-ಸಮಾಜ ವಿಜ್ಞಾನ ಪರೀಕ್ಷೆಗಳು ಜರುಗಲಿದೆ.
ಪರೀಕ್ಷೆಗಳು ಸುಗಮವಾಗಿ ನಡೆಸುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ 163 ಕಲಂ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳ ಕ್ಷೇಮಕ್ಕಾಗಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿರಲಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಇರುವುದರಿಂದ ಹೆಸ್ಕಾಂ ಇಲಾಖೆಯವರು ವಿದ್ಯುತ್ ನಿಲುಗಡೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಗಾಗಿ ಪ್ರತಿ ಕೇಂದ್ರದಲ್ಲು ಪೊಲೀಸ್ ಸರ್ಪಗಾವಲು ಇರಲಿದೆ.
ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರಿಗೆ ತರಭೇತಿ ನೀಡಲಾಗಿದ್ದು ಎಲ್ಲವು ಸಜ್ಜಾಗಿದೆ ಎಂದು ಶಿಕ್ಷಣ ಇಲಾಖೆಯಿಂದ ಮಾದ್ಯಮಕ್ಕೆ ಮಾಹಿತಿ ಲಭಿಸಿದೆ.

ವಿದ್ಯಾರ್ಥಿಗಳು ಯಾವುದೆ ಭಯ ಭೀತಿ ಇಲ್ಲದೆ ಶಾಂತ ಮನಸ್ಸಿನಿಂದ ನಿರ್ಭೀತಿಯಿಂದ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸುವಂತಾಗಲಿ ಇದರಿಂದ ನಿಮ್ಮ ಪೋಷಕರಿಗೆ, ಓದಿದ ಶಾಲೆಗೆ,ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ನಿಮ್ಮ ಊರಿಗೆ ಕೀರ್ತಿ ತರುವಂತಾಗಲಿ. ಪರೀಕ್ಷೆ ಬರೆಯುತ್ತಿರುವ ತಾಲೂಕಿನ ಎಲ್ಲಾ ಮಕ್ಕಳಿಗೆ ಶುಭವಾಗಲಿ.
ರೇಖಾ ನಾಯ್ಕ್
ಕ್ಷೇತ್ರ ಶಿಕ್ಷಣಾಧಿಕಾರಿಗಳು
ಯಲ್ಲಾಪುರ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ” ಹಿಂದು ಮುಖಂಡ ಸೋಮೇಶ್ವರ ನಾಯ್ಕ್ ಗೆ ಒಪ್ಪುವಂತಹ ಸಾಲುಗಳು.

ಪ್ರತಿಧ್ವನಿ ಯಲ್ಲಾಪುರ : ಸೇವಾ ಭಾವದಲ್ಲಿ ಸಮಾಜಕ್ಕಾಗಿ ಶ್ರಮಿಸುವ ಮತ್ತು ಸಮಾಜದ ಒಳಿತಿಗಾಗಿ ಸದಾ ಮಿಡಿವ ಮನಸ್ಸುಗಳಲ್ಲಿ ಯಲ್ಲಾಪುರದ ಹಿಂದು …

Leave a Reply

Your email address will not be published. Required fields are marked *