Breaking News

ಯಲ್ಲಾಪುರದಲ್ಲಿ ನಡೆದ ಯುಗಾದಿ ಉತ್ಸವದ ಜಾಗೃತಿಗಾಗಿ ಬೃಹತ್ ಬೈಕ್ ರ‍್ಯಾಲಿ.

ಪ್ರತಿಧ್ವನಿ ಯಲ್ಲಾಪುರ : ಹಿಂದುಗಳ ನೂತನ ವರ್ಷಾರಂಭ ಯುಗಾದಿ ಯಿಂದ ಪ್ರಾರಂಭಗೊಳ್ಳುವ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಯುಗಾದಿ ಉತ್ಸವವನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಉತ್ಸವದ ಜಾಗೃತಿಗಾಗಿ ಮಂಗಳವಾರ ಬೃಹತ್ ಬೈಕ್ ರ‍್ಯಾಲಿ ಜರುಗಿತು.

ಪಟ್ಟಣ ಕಾಳಮ್ಮನಗರ ಕಾಳಮ್ಮದೇವಾಲಯದಲ್ಲಿ ಪೂಜೆ‌ ನೆರವೇರಿಸಿ ಪ್ರಾರಂಭಗೊಂಡ ಬೈಕ್ ರ‍್ಯಾಲಿಗೆ ಉತ್ಸವ ಸಮಿತಿ ಪ್ರಮುಖರು ಹಿರಿಯರು ಚಾಲನೆ ನೀಡಿದರು.

ಪಟ್ಟಣಾಧ್ಯಂತ ಸಂಚರಿಸಿದ ಬೈಕ್ ರ‍್ಯಾಲಿ ಗ್ರಾಮದೇವಿ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು. ರ‍್ಯಾಲಿ ಯಲ್ಲಿ ನೂರಾರು ಬೈಕ್ ಗಳು ಭಾಗವಹಿಸಿದ್ದು ಕೇಸರಿ ಪತಾಕೆ ಕಟ್ಟಿಕೊಂಡು ಸಂಭ್ರಮದಲ್ಲಿ ತೊಡಗಿಕೊಂಡಿದ್ದರು.

ಮಕ್ಕಳ ಸೈಕಲ್ ಜಾಥಾ ಕೂಡ ರ‍್ಯಾಲಿ ಆಕರ್ಷಣೆ ಹೆಚ್ಚಿಸಿತ್ತು. ಮಹಿಳೆಯರು ಸಹ ರ‍್ಯಾಲಿ ಯಲ್ಲಿ ಪಾಲ್ಗೊಂಡರು.

ವಿಶೇಷವಾಗಿ ‌ಯುಗಾದಿ ಉತ್ಸವದ ಬೈಕ್ ರ‍್ಯಾಲಿ ಯಲ್ಲಿ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಭಾವಚಿತ್ರ ಹಿಡಿದು ಪ್ರದರ್ಶನ ಮಾಡುತ್ತಾ ಜೈಕಾರ ಕೂಗುತ್ತ ಅಪ್ಪು ಮೇಲಿನ ಅಭಿಮಾನವನ್ನು ತೋರಿಸಿದರು ಇದು ಮೆರವಣಿಗೆಯ ಘನತೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

https://youtube.com/shorts/QMypNGFXwts?si=wkstn2-gLPqLhcfK

ಬೈಕ್ ರ‍್ಯಾಲಿ ಆಗಿದ್ದರು ಮೆರವಣಿಗೆಯಲ್ಲಿ ಸಾಕಷ್ಟು‌ ತೆರೆದ ಜೀಪ್ ಗಳು ಕೆಸರಿ ಅಲಂಕಾರದೊಂದಿಗೆ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ” ಹಿಂದು ಮುಖಂಡ ಸೋಮೇಶ್ವರ ನಾಯ್ಕ್ ಗೆ ಒಪ್ಪುವಂತಹ ಸಾಲುಗಳು.

ಪ್ರತಿಧ್ವನಿ ಯಲ್ಲಾಪುರ : ಸೇವಾ ಭಾವದಲ್ಲಿ ಸಮಾಜಕ್ಕಾಗಿ ಶ್ರಮಿಸುವ ಮತ್ತು ಸಮಾಜದ ಒಳಿತಿಗಾಗಿ ಸದಾ ಮಿಡಿವ ಮನಸ್ಸುಗಳಲ್ಲಿ ಯಲ್ಲಾಪುರದ ಹಿಂದು …

Leave a Reply

Your email address will not be published. Required fields are marked *