Breaking News

ಸಣ್ಣ ಪಾನಿಗುಂಡಿ ಗ್ರಾಮಕ್ಕೆ ತಹಶಿಲ್ದಾರರ ಸಹಿತ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ..


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಣ್ಣ ಪಾನಿಗುಂಡಿ ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು ಪ್ರತಿಧ್ವನಿ ಯಲ್ಲಾಪುರ ನ್ಯೂಸ್ ಮತ್ತು ಉದಯಕಾಲ ಸುದ್ದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ತಾಲೂಕು ದಂಢಾದಿಕಾರಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಭೇಟಿಯಾಗಿ ವಾಸ್ತವಿಕತೆ ಅರಿತರು.


ತಹಶಿಲ್ದಾರ್ ಚಂದ್ರಶೇಖರ ಹೊಸಮನಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿನ ಸಮಸ್ಯೆಗಳನ್ನು ಆಲಿಸಿ ಪರಿಸ್ಥಿತಿ ಯನ್ನು ಪ್ರತ್ಯಕ್ಷವಾಗಿ ಕಂಡರು.


ಶೀಘ್ರವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಅಂಗನವಾಡಿ ಹಾಗು ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ವಿಟ್ಟು ದೊಂಡು ಪಟಕಾರೆ ಮತ್ತು ಸ್ಥಳೀಯ ಪ್ರಮುಖರು ಸಾರ್ವಜನಿಕರು ಮತ್ತು ಮಕ್ಕಳು ಉಪಸ್ಥಿತರಿದ್ದರು

ಸಣ್ಣ ಪಾನಿಗುಂಡಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ್ದು ಸಮಸ್ಯೆಗಳಿರುವುದು ಅರಿವಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ಶೀಘ್ರವಾಗಿ ಬಗೆಹರಿಸಬೇಕಿದ್ದು ಕೊಳವೆ ಬಾವಿ ಕೊರೆಸುವ ಬಗ್ಗೆ ಮಾತನಾಡಲಿದ್ದೇನೆ. ಉಳಿದಂತೆ ಅರಣ್ಯ ದಾರಿಯಲ್ಲಿ ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿಗೆ ತೆರಳುವುದು ಕಷ್ಟವಾಗಿರುವುದರ ಕುರಿತು ಗ್ರಾಮಸ್ಥರು ಮನವಿ ಮಾಡಿದ್ದಾರೆ ಅದರಂತೆ ಎಷ್ಟು ಮಕ್ಕಳಿದ್ದರೆ ಗ್ರಾಮದಲ್ಲಿ ಅ
ಅಂಗನವಾಡಿ ಪ್ರಾರಂಭ ಮಾಡಬಹುದೆಂಬುದನ್ನು ಚರ್ಚಿಸುತ್ತೇನೆ, ರಸ್ತೆ ಬಗ್ಗೆಯೂ ಕೂಡ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದೇನೆ.
ಚಂದ್ರಶೇಖರ ಹೊಸಮನಿ, ತಹಶಿಲ್ದಾರ್, ಯಲ್ಲಾಪುರ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇವರ ಕಲ್ಲಳ್ಲಿಯಲೊಂದು ಬುಡಕಟ್ಟು ಸಿದ್ದಿ ಸಮುದಾಯದ ಜಾನಪದ ಜಗತ್ತಿನ ಪರಿಚಯ.

ಕೇಬಲ್ ನಾಗೇಶ್, ಯಲ್ಲಾಪುರ.🖋 ಪ್ರತಿಧ್ವನಿ ಯಲ್ಲಾಪುರ : ನಶಿಸಿ ಹೋಗುತ್ತಿರುವ ಅನೇಕ ಸಂಸ್ಕೃತಿಗಳಲ್ಲಿ ಅರಣ್ಯ ವಾಸಿ ಬುಡಕಟ್ಟು ಸಿದ್ದಿ ಸಮುದಾಯದ …

Leave a Reply

Your email address will not be published. Required fields are marked *