Breaking News

ಏಸುಪ್ರಭುವು ಶಿಲುಬೆಗೇರಿದ ಪವಿತ್ರ ಗುಡ್ ಫ್ರೈಡೆ ಕಿರವತ್ತಿಯಲ್ಲಿ ಶಿಲುಬೆ ಹೊತ್ತು ಮೆರವಣಿಗೆ.

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಿರವತ್ತಿಯಲ್ಲಿ “ಸೆಂಟ್ ಜೋಸೆಫ್ ಚಚ್೯ ” ಫಾದರ್ ಮೈಕೆಲ್ ಪಿಂಟೋ  ನೇತೃತ್ವದಲ್ಲಿ ಯೇಸುಕ್ರಿಸ್ತನು ಶಿಲುಬೆಯ ಮೇಲೆ ಮರಣವನ್ನಪ್ಪಿದ ದಿನವನ್ನು ಶ್ರದ್ದಾ ಭಕ್ತಿಯಿಂದ ಪ್ರಾರ್ಥಿಸಿ ಮೆರವಣಿಗೆ ಮಾಡುವ ಮೂಲಕ ಆಚರಿಸಲಾಯಿತು.

ಇದು ಕ್ರೈಸ್ತರ ನಂಬಿಕೆಯ ಪ್ರಕಾರ, ಅವರ ತ್ಯಾಗದ ಮೂಲಕ ಮಾನವಕುಲಕ್ಕೆ ಪಾಪ ವಿಮೋಚನೆ ಮತ್ತು ಮೋಕ್ಷ ದೊರೆತ ದಿನವಾಗಿದೆ.

ಈ ದಿನವನ್ನು ಉಪವಾಸ, ಪ್ರಾರ್ಥನೆ, ಮತ್ತು ಚರ್ಚ್‌ಗಳಲ್ಲಿ ವಿಶೇಷ ಸೇವೆಗಳ (ವೇಷರ್ ಪ್ರಾರ್ಥನೆ) ಮೂಲಕ ಆಚರಿಸಲಾಗುತ್ತದೆ. ಇದು ಶೋಕ ಮತ್ತು ಪಶ್ಚಾತ್ತಾಪದ ದಿನವಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ” ಹಿಂದು ಮುಖಂಡ ಸೋಮೇಶ್ವರ ನಾಯ್ಕ್ ಗೆ ಒಪ್ಪುವಂತಹ ಸಾಲುಗಳು.

ಪ್ರತಿಧ್ವನಿ ಯಲ್ಲಾಪುರ : ಸೇವಾ ಭಾವದಲ್ಲಿ ಸಮಾಜಕ್ಕಾಗಿ ಶ್ರಮಿಸುವ ಮತ್ತು ಸಮಾಜದ ಒಳಿತಿಗಾಗಿ ಸದಾ ಮಿಡಿವ ಮನಸ್ಸುಗಳಲ್ಲಿ ಯಲ್ಲಾಪುರದ ಹಿಂದು …

Leave a Reply

Your email address will not be published. Required fields are marked *