Breaking News

ಧಾರ್ಮಿಕ ಸೇವೆಗೆ ಚಂದಗುಳಿ ಗಣಪನ ಸನ್ನಿದಾನದಲ್ಲಿ ಹೆಬ್ಬಾರ್ ದಂಪತಿಗಳಿಗೆ  ಸಂದ ಗೌರವ..

ಕೇಬಲ್ ನಾಗೇಶ್, ಯಲ್ಲಾಪುರ🖋

ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಚಂದಗುಳಿಯ ಶ್ರೀ ಸಿದ್ಧಿವಿನಾಯಕ ದೇವಾಲಯದ ವತಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಧಾರ್ಮಿಕ ಸೇವೆಗೆ “ಗೌರವಾರ್ಪಣೆ” ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ಸೇರಿದಂತೆ ಗಣ್ಯರೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಲ್ಲಿಸಲಾದ ಗೌರವವನ್ನು ಅವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾಸಕರ ಧರ್ಮಪತ್ನಿ ವನಜಾಕ್ಷಿ ಶಿವರಾಮ ಹೆಬ್ಬಾರ್ ಸೇರಿದಂತೆ, ಚಂದಗುಳಿ ಸಿದ್ಧಿವಿನಾಯಕ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪಟ್ಟಣ ಸಮೀಪದ ಅರಣ್ಯದಲ್ಲಿ ಶ್ರೀಗಂಧ ಚೋರರ ಕರಾಮತ್ತು ಗಂಧದ ಮರ ಕಡಿದ ಕಳ್ಳರು.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಮೀಪದಲ್ಲಿರುವ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳರು ತಮ್ಮ ಕೈಚಳಕ ತೋರಿದ್ದು ಗುಣಮಟ್ಟದ ಮತ್ತು …

Leave a Reply

Your email address will not be published. Required fields are marked *