Breaking News

ಪ್ರಶಸ್ತಿಗೆ ಪುಸ್ತಕ ಆಹ್ವಾನ

ಪ್ರತಿಧ್ವನಿ ಯಲ್ಲಾಪುರ: ಯಲ್ಲಾಪುರದ ಸಾಹಿತ್ಯ ಪ್ರೇಮಿ, ಸಾಹಿತ್ಯ ಸಂಘಟಕ ಮಂಜುನಾಥ ಪಟಗಾರ ಅವರು ಕನ್ನಡದಲ್ಲಿ ಸಾಹಿತ್ಯ ಬರೆಯುವವರನ್ನು ಪ್ರೋತ್ಸಾಹಿಸಲು ತಮ್ಮ ತಾಯಿಯವರ ಹೆಸರಿನಲ್ಲಿ ‘ಮಾತೆ ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿ’ ಸ್ಥಾಪಿಸಿ ನಡೆಸಿಕೊಂಡು ಬಂದಿದ್ದಾರೆ.

ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ ಸನ್ಮಾನಗಳನ್ನೊಳಗೊಂಡಿದ್ದು, ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಈ ಬಾರಿ (2025) ಕವನ ಸಂಕಲನಕ್ಕೆ ನೀಡಲು ಉದ್ದೇಶಿಸಲಾಗಿದೆ.

ಹಾಗಾಗಿ 2025 ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕವನ ಸಂಕಲನದ ಎರಡು ಪ್ರತಿಗಳನ್ನು 30 ಎಪ್ರಿಲ್ 2026 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ:

ಶ್ರೀ ಮಂಜುನಾಥ ಟಿ. ಪಟಗಾರ
ಅಧ್ಯಕ್ಷರು
ನವಚೇತನ ಸಾಂಸ್ಕೃತಿಕ ಕಲಾ ಸಾಹಿತ್ಯ ವೇದಿಕೆ ಬಾಳಗಿಮನೆ
ಪೋಸ್ಟ್: ಬಾಳಗಿಮನೆ -581359
ತಾ: ಯಲ್ಲಾಪುರ
ಉತ್ತರ ಕನ್ನಡ ಜಿಲ್ಲೆ
ಮೊ: 9449148467

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇವರ ಕಲ್ಲಳ್ಲಿಯಲೊಂದು ಬುಡಕಟ್ಟು ಸಿದ್ದಿ ಸಮುದಾಯದ ಜಾನಪದ ಜಗತ್ತಿನ ಪರಿಚಯ.

ಕೇಬಲ್ ನಾಗೇಶ್, ಯಲ್ಲಾಪುರ.🖋 ಪ್ರತಿಧ್ವನಿ ಯಲ್ಲಾಪುರ : ನಶಿಸಿ ಹೋಗುತ್ತಿರುವ ಅನೇಕ ಸಂಸ್ಕೃತಿಗಳಲ್ಲಿ ಅರಣ್ಯ ವಾಸಿ ಬುಡಕಟ್ಟು ಸಿದ್ದಿ ಸಮುದಾಯದ …

Leave a Reply

Your email address will not be published. Required fields are marked *