Breaking News

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ,ವಿಶ್ವದರ್ಶನ ಪಿಯು ಕಾಲೇಜು ಗಣನೀಯ ಸಾಧನೆ

ಪ್ರತಿಧ್ವನಿ ಯಲ್ಲಾಪುರ : ಪದವಿಪೂರ್ವ ಶಿಕ್ಷಣ ಇಲಾಖೆಯ 2025–26ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಟ್ಟಣದ ವಿಶ್ವದರ್ಶನ ಪಿಯು ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.


ವಿಜ್ಞಾನ ವಿಭಾಗದಲ್ಲಿ ಅನನ್ಯ ನಾಗೇಶ್ ಹೆಗಡೆ 96.8% ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದರೆ, ಸಿಂಚನಾ ವಿ. ಗೌಡ 96.3% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಗಣೇಶ ಶಾಂತಾರಾಮ ದೇಸಾಯಿ 94.6% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.


ವಾಣಿಜ್ಯ ವಿಭಾಗದಲ್ಲಿ ಆಶಾಬಿ ಸಲೀಂ ಶೇಖ್ 98.3% ಅಂಕಗಳೊಂದಿಗೆ ಪ್ರಥಮ ಸ್ಥಾನ, ಶ್ರೀಗಣೇಶ ವಿ. ಬೋಳಗುಡ್ಡೆ 98% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ದೀಪಾ ಪಟಗಾರ್ 97.6% ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.


ಒಟ್ಟು ವಿದ್ಯಾರ್ಥಿಗಳಲ್ಲಿ ಶೇಕಡಾ 43 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ , ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪಟ್ಟಣ ಸಮೀಪದ ಅರಣ್ಯದಲ್ಲಿ ಶ್ರೀಗಂಧ ಚೋರರ ಕರಾಮತ್ತು ಗಂಧದ ಮರ ಕಡಿದ ಕಳ್ಳರು.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಮೀಪದಲ್ಲಿರುವ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳರು ತಮ್ಮ ಕೈಚಳಕ ತೋರಿದ್ದು ಗುಣಮಟ್ಟದ ಮತ್ತು …

Leave a Reply

Your email address will not be published. Required fields are marked *